Call Us Now: 08272 221717

ಸೆ.11ರಂದು ರೈತ ದಲಿತ ಕಾರ್ಮಿಕ ಜನಪರ ಚಳುವಳಿಗಳ ಒಕ್ಕೂಟದಿಂದ ಬಿ.ಸಿರೋಡಿನಲ್ಲಿ ಜಿಲ್ಲಾಮಟ್ಟದ ವಿಚಾರಗೋಷ್ಠಿ

September 9, 2020

ಮೂಡುಬಿದಿರೆ: ರೈತ ದಲಿತ ಕಾರ್ಮಿಕ ಜನಪರ ಚಳುವಳಿಗಳ ಒಕ್ಕೂಟದ ಆಶ್ರಯದಲ್ಲಿ ವಿವಿಧ ವಿಷಯಗಳ ಕುರಿತು ವಿಚಾರಗೋಷ್ಠಿ ಮತ್ತು ಸಂವಾದ ಸೆ.11ರಂದು ಬೆಳಗ್ಗೆ 10ಕ್ಕೆ ಬಿ.ಸಿ.ರೋಡ್ ರಂಗೋಲಿ ಸಭಾಭವನದಲ್ಲಿ ನಡೆಯಲಿದೆ ಎಂದು ಒಕ್ಕೂಟದ ಉಪಾಧ್ಯಕ್ಷ ಆಲ್ವಿನ್ ಮಿನೇಜಸ್ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಭೂಸುಧಾರಣೆಗಳ ಕಾಯಿದೆ, ಎಪಿಎಂಸಿ ಕಾಯಿದೆ, ಕಾರ್ಮಿಕ ಕಾಯಿದೆ ಅಗತ್ಯ ಸರಕುಗಳ ಕಾಯ್ದೆಗಳ ತಿದ್ದುಪಡಿ, ವಿದ್ಯುತ್ ಖಾಸಗೀಕರಣ ಹಾಗೂ ಮೇಲ್ಜಾತಿಯವರಿಗೆ ಶೇ10 ಮೀಸಲಾತಿ ಕುರಿತು ಸಂವಾದ ನಡೆಯಲಿದೆ. ವಿವಿಧ ವಿಷಯ ತಜ್ಞರು ಮಾಹಿತಿ ನೀಡಲಿದ್ದಾರೆ ಎಂದು ಅವರು ಹೇಳಿದರು.
ಮೂಡುಬಿದಿರೆಯಿಂದ 100 ರೈತರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ವಿವಿಧ ಸಂಘಟನೆಗಳ ಪ್ರಮುಖರಾದ ಸುಭಾಶ್ಚಂದ್ರ ಚೌಟ, ಲಿಯೋ ನಜ್ರತ್, ಜಯಾನಂದ ಕೋಟ್ಯಾನ್ ಉಪಸ್ಥಿತರಿದ್ದರು.