Call Us Now: 08272 221717

ರಾತ್ರಿ ವೇಳೆ ಬಸ್, ಗೂಡ್ಸ್ ಲಾರಿ ಸಂಚಾರಕ್ಕೆ ಸರ್ಕಾರ ಅನುಮತಿ

June 12, 2020

ನವದೆಹಲಿ: ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ರಾತ್ರಿ ವೇಳೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಕೇಂದ್ರ ಸರ್ಕಾರವು ಬಸ್ ಗಳು ಮತ್ತು ಗೂಡ್ಸ್ ಲಾರಿಗಳ ಸಂಚಾರಕ್ಕೆ ಶುಕ್ರವಾರ ಅನುಮತಿ ನೀಡಿದೆ.

ಈ ಕುರಿತು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ್ದಾರೆ. ಪ್ರಯಾಣಿಕರನ್ನು ಸಾಗಿಸುವ ಬಸ್‌ಗಳು ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸಬಹುದು ಎಂದು ಅಜಯ್ ಭಲ್ಲಾ ತಿಳಿಸಿದ್ದಾರೆ