Call Us Now: 08272 221717

ಮೂಡುಬಿದಿರೆ ತಾ.ಪಂ ಸದಸ್ಯನ ಅಪಹರಣ: ಠಾಣೆಯಲ್ಲಿ ದೂರು ದಾಖಲು

August 3, 2020

ಮೂಡುಬಿದಿರೆ: ಇಲ್ಲಿನ ತಾಲೂಕು ಪಂಚಾಯಿತಿ ಸದಸ್ಯರೊಬ್ಬರನ್ನು ಅಪಹರಣ ಮಾಡಲಾಗಿದೆಂದು ಸ್ವತಃ ಅಪಹರಣಕೊಳ್ಳಾಗಾದ ವ್ಯಕ್ತಿಯೇ ಬಂದು ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ.

ತಾಲೂಕಿನ ಕಲ್ಲಮುಂಡ್ಕೂರು ತಾಲೂಕು ಪಂಚಾಯಿತಿ ಕ್ಷೇತ್ರದ ಸದಸ್ಯ ಸುಕುಮಾರ್ ಸನಿಲ್ ಅಪಹರಣಕೊಳಗಾದವರು. ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಇವರು ಸೋಮವಾರ ಮೂಡುಬಿದಿರೆ ತಾಲೂಕು ಕಚೇರಿಯಲ್ಲಿ ನಡೆಯಬೇಕಿದ್ದ ತಾಲೂಕು ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷದ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕಿತ್ತು. ಅದನ್ನು ತೆಡೆಯಲು ತನ್ನನ್ನು ಅಪಹರಣ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ದೂರು ನೀಡುವ ಕೆಲವು ಗಂಟೆಗಳ ಮೊದಲು ಸುಕುಮಾರ್ ಸನಿಲ್ ಅವರು ಕಾಂಗ್ರೆಸ್ ಮುಖಂಡರೊಬ್ಬರಿಗೆ ಕರೆ ಮಾಡಿ, ನನ್ನನ್ನು ಯಾರೋ ಅಪಹರಣ ಮಾಡಿ ಉಡುಪಿಗೆ ತಂದು ಬಿಟ್ಟಿದ್ದಾರೆ ಎಂದು ತಿಳಿಸಿದ್ದರು.