Call Us Now: 08272 221717

ಮೂಡುಬಿದಿರೆ : ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಪೂಜೆ

October 26, 2020

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜು ಮತ್ತು ಎಕ್ಸಲೆಂಟ್ ಆಂಗ್ಲಮಾಧ್ಯಮ ಶಾಲೆಯಲ್ಲಿ
ಶ್ರೀ ಶಾರದ ಪೂಜೆಯನ್ನು ಸರಳ ರೀತಿಯಲ್ಲಿ ನಡೆಸಲಾಯಿತು.

ಪೂಜಾ ವಿಧಾನವನ್ನು ಪುರೋಹಿತ ನಾಗೇಂದ್ರ ಇಂದ್ರ ನೆರವೇರಿಸಿದರು.
ಮೌಲ್ಯ ಮತ್ತು ಮನ್ವಿತ್ ನೇತೃತ್ವದಲ್ಲಿ ನಡೆದ ಭಜನಾ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಯುವರಾಜ್ ಹಾಗೂ ಸಂಸ್ಥೆಯ ಸಿಬ್ಬಂದಿಗಳು ಪಾಲ್ಗೊಂಡರು.