Call Us Now: 08272 221717

ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರದಿಂದ ಅನುಮತಿ: ಮಾರ್ಗಸೂಚಿಯಲ್ಲಿ ಏನೇನಿದೆ?

August 18, 2020

ಮೂಡುಬಿದಿರೆ: ಕೊರೊನಾ ವೈರಸ್ ಭೀತಿ ನಡೆಯು ಸರ್ಕಾರವು ಸಾರ್ವಜನಿಕ‌ ಗಣೇಶೋತ್ಸವ ನಡೆಸಲು ರಾಜ್ಯ ಸರ್ಕಾರವು ಅನುಮತಿ ನೀಡಿದ್ದು, ಜನರಲ್ಲಿ ವೈರಸ್ ಹರಡದಂತೆ ಮುಂಜಾಗ್ರತ ಕ್ರಮವಾಗಿ ಗಣೇಶೋತ್ಸವ ನಡೆಸಲು ಸರ್ಕಾರ ಮಾರ್ಗಸೂಚಿ ನೀಡಿದೆ.

ಪರಿಷ್ಕೃತ ಆದೇಶ ಪ್ರಮುಖ ಅಂಶಗಳು

1.ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದಲ್ಲಿ, ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ, ಖಾಸಗಿ , ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಟ ಸಂಖ್ಯೆಯೊಂದಿಗೆ ಆಚರಿಸಬಹುದು.

2. ನಾಲ್ಕು ಅಡಿ ಎತ್ತರದ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸುವುದು.

3. ಪಾರಂಪರಿಕ ಗಣೇಶೋತ್ಸವಕ್ಕೆ, ಗಣೇಶೋತ್ಸವ ಸಮಿತಿಗಳ ಅಥವಾ ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಮುನಿಸಿಪಲ್ ಕಾರ್ಪೋರೇಷನ್ ಅಥವಾ ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯತಕ್ಕದ್ದು. ಒಂದು ವಾರ್ಡಿಗೆ ಅಥವಾ ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲು ಪ್ರೋತ್ಸಾಹಿಸುವುದು.

4. ಇಂತಹ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸುವುದು. ಒಮ್ಮೆಲೆ 20 ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾಧಿಗಳಿಗೆ ಅನುವು ಮಾಡುವುದು,

5, ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ ಸಂಗೀತ ನೃತ್ಯ ಇನ್ನಿತರ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ.

6. ಶ್ರೀ ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಿ ಅಥವಾ ಯಾವುದೇ ಸಂದರ್ಭಗಳಲ್ಲಿ ಯಾವುದೇ ರೀತಿಯ ಮೆರವಣಿಗೆ ಹೊರಡಿಸಿತಕ್ಕದ್ದಲ್ಲ, ಮಾಡತಕ್ಕದ್ದಲ್ಲ. ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ.

ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಮತ್ತು ಸರ್ಕಾರಿ/ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ಅತೀ ಸಮೀಪ ವಾಗುವಂತಹ ಮಾರ್ಗ ಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ/ ಜಿಲ್ಲಾಡಳಿತ/ ಹತ್ತಿರದ ಸ್ಥಳೀಯ ಸಂಸ್ಥೆಗಳ | ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್ ಟ್ಯಾಂಕ್‌ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್ ಗಳಲ್ಲಿ ವಿಸರ್ಜಿಸುವುದು.