Call Us Now: 08272 221717

ಮೂಡುಬಿದಿರೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧ ಸಾವು

June 22, 2020


ಮೂಡುಬಿದಿರೆ: ಮಂಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಬಳಿಕ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮುಂದಿನ ಚಿಕಿತ್ಸೆಗಾಗಿ ವರ್ಗಾವಣೆಗೊಂಡಿದ್ದ ವೃದ್ಧರೋರ್ವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆ ಅಥವಾ ಮಂಗಳೂರು ಪೊಲೀಸ್ ಕಮೀಷನರ್ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


ಆಸ್ಪತ್ರೆಯ ದಾಖಲಾತಿಯಲ್ಲಿ ರವೀಂದ್ರನಾಥ್ (59ವ) ಎಂದು ನಮೂಸಲಾಗಿದೆ. ಮಾರ್ಚ್ ತಿಂಗಳಲ್ಲಿ ಮಂಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆ ಬಳಿಕ ಕಾರಣಾಂತರಗಳಿಂದ ಅವರನ್ನು ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ ಭಾನುವಾರ ಮೃತಪಟ್ಟಿದ್ದಾರೆ. ಇವರು ತುಳು ಕನ್ನಡ ಭಾಷೆ ಮಾತ್ರ ಮಾತನಾಡುತ್ತಿದ್ದರು ಇವರ ಬಗ್ಗೆ ಮಾಹಿತಿ ಇದ್ದವರು ಮೂಡುಬಿದಿರೆ ಪೊಲೀಸ್ ಠಾಣೆ ಅಥವಾ ಪೊಲೀಸ್ ಸಹಾಯವಾಣಿ-100ಗೆ ಸಂಪರ್ಕಿಸುವಂತೆ ಮೂಡುಬಿದಿರೆ ಪೊಲೀಸರು ಪ್ರಕಟಣೆ ತಿಳಿಸಿದ್ದಾರೆ.