Call Us Now: 08272 221717

ಆಗಸ್ಟ್ 3: ಮೂಡುಬಿದಿರೆ ತಾಲೂಕು ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

August 1, 2020

ಮೂಡುಬಿದಿರೆ: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಮೂಡುಬಿದಿರೆ ತಾಲೂಕು ಪಂಚಾಯತ್ ಇದರ ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಕ್ಕೆ ಆಗಸ್ಟ್ 3ರಂದು ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಾರ್ಪಾಡಿ-ಥರ್ಡ್( ಲೇಬರ್ ಶಾಲೆ) ಚುನಾವಣೆ ನಡೆಯಲಿದೆ.

ಆ.10ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಸಭೆ ನಡೆಯಲಿದ್ದು, ನಾಮಪತ್ರವನ್ನು ಸಲ್ಲಿಸಲು ಅವಕಾಶವಿದೆ. 3 ಗಂಟೆಗೆ ನಾಮಪತ್ರ ಪರಿಶೀಲನೆ ನಡೆಯಲಿದೆ. ಒಂದಕ್ಕಿಂತ ಹೆಚ್ಚಿನ ಸದಸ್ಯರು ಆಯಾ ಸ್ಥಾನಕ್ಕೆ ಸ್ಪರ್ಧಿಸಿದಲ್ಲಿ ಕೈ ಎತ್ತುವ ಮೂಲಕ ಆಯ್ಕೆ ನಡೆಯಲಿದೆ.

ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ವರ್ಗ ಮೀಸಲಾತಿ ಇದೆ. ಮೂಡುಬಿದಿರೆ ತಾಲೂಕಿನಲ್ಲಿ ಒಟ್ಟು 8 ಮಂದಿ ತಾಲೂಕು ಪಂಚಾಯತ್ ಸದಸ್ಯರಿದ್ದಾರೆ.