Call Us Now: 08272 221717

ರೂ.140 ಕೋಟಿ ವೆಚ್ಚದಲ್ಲಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರಕ್ಕೆ ಕುಡಿಯುವ ನೀರು ಯೋಜನೆ : ಉಮಾನಾಥ ಕೋಟ್ಯಾನ್

October 8, 2020


ಮೂಡುಬಿದಿರೆ: ಕೇಂದ್ರ ಸರ್ಕಾರದ `ಜಲ್‍ಜೀವನ್ ಮಿಷನ್’ ಯೋಜನೆಯಡಿಯಲ್ಲಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರಕ್ಕೆ ದಿನದ 24 ಗಂಟೆ ನಿರಂತರ ಕುಡಿಯುವ ನೀರು ಯೋಜನೆ ಅನುಷ್ಠಾನಕ್ಕೆ ಪ್ರಯತ್ನ ನಡೆಯುತ್ತಿದೆ. ಸುಮಾರು 140 ಕೋಟಿ ವೆಚ್ಚದ ಈ ಯೋಜನೆ ಬಗ್ಗೆ ಶುಕ್ರವಾರ ಬೆಂಗಳೂರಿನಲ್ಲಿ ಪಂಚಾಯತ್‍ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಅಧಿಕಾರಿಗಳ ಸಭೆಯಲ್ಲಿ ನಾನು ಕೂಡ ಭಾಗವಹಿಸಲಿದ್ದು ಯೋಜನೆಗೆ ಅನುಮೋದನೆ ಸಿಕ್ಕಿದ್ದಲ್ಲಿ ನಮ್ಮ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸದು ಎಂದು ಶಾಸಕ ಉಮಾನಾಥ ಕೋಟ್ಯಾನ್ ತಿಳಿಸಿದ್ದಾರೆ