Call Us Now: 08272 221717

ಮೂಡುಬಿದಿರೆ: ವಿಶ್ವ ಛಾಯಾಚಿತ್ರ ದಿನಾಚರಣೆ: ಸಿ.ಎಚ್ ಗಫೂರ್, ಕುಂಟಾಡಿ ಪೈ, ಡಾ.ಭರತ್ಗೆ ಸನ್ಮಾನ

August 19, 2020

ಮೂಡುಬಿದಿರೆ: ವಿಶ್ವ ಛಾಯಾಚಿತ್ರ ದಿನಾಚರಣೆಯಂಗವಾಗಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ.ಕ-ಉಡುಪಿ ಜಿಲ್ಲೆ ಇದರ ಮೂಡುಬಿದಿರೆ ವಲಯದಿಂದ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ ಬುಧವಾರ ನಡೆಯಿತು.

ಲಾಕ್‌ಡೌನ್ ಸಂದರ್ಭದಲ್ಲಿ ಹಲವಾರು ಕುಟುಂಬಗಳಿಗೆ ಸಹಾಯ ಮಾಡಿರುವ ಜೀವರಕ್ಷಕ ಸಿ.ಎಚ್. ಅಬ್ದುಲ್ ಗಫೂರ್ ಅವರನ್ನು ಅವರ ಮನೆಗೆ ತೆರಳಿ ಸನ್ಮಾನಿಸಲಾಯಿತು.
ಅಸೋಸಿಯೇಷನ್‌ನ ವಲಯಾಧ್ಯಕ್ಷ ಅಧ್ಯಕ್ಷ ರವಿ.ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ಸಮಾಜ ಮಂದಿರ ಸಭಾದಲ್ಲಿ ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ ಎಂ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಹಿರಿಯ ಪತ್ರಕರ್ತ ಕುಂಟಾಡಿ ದಯಾನಂದ ಪೈ ಮತ್ತು ಡಾ.ಭರತ್ ಅವರ ಸಾಧನೆಗಳನ್ನು ಗುರುತಿಸಿ ಗೌರವಿಸಲಾಯಿತು.
ಉದ್ಯಮಿ ಅಬುಲಾಲ ಪುತ್ತಿಗೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಉಪಾಧ್ಯಕ್ಷ ಸುನಿಲ್ ಕೋಟ್ಯಾನ್, ಜತೆ ಕಾರ್ಯದರ್ಶಿ ಮನೋಜ್ ಪುತ್ತಿಗೆ, ಹಿರಿಯ ಫೋಟೋಗ್ರಾರ‍್ಸ್ಗಳಾದ ರಾಮ ಕೋಟ್ಯಾನ್ ಮತ್ತು ಸುಂದರ ಸಾಲ್ಯಾನ್ ಉಪಸ್ಥಿತರಿದ್ದರು. ದಶಮಾನೋತ್ಸವದಂಗವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ದಶಮಾನೋತ್ಸವ ಸಮಿತಿಯ ಸಂಚಾಲಕ ವಿಲ್ಫೆಡ್ ಮೆಂಡೋನ್ಸಾ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜೇಶ್ ಅಮೀನ್ ಸನ್ಮಾನಪತ್ರ ವಾಚಿಸಿದರು. ಪ್ರಧಾನ ಕಾರ್ಯದರ್ಶಿ ನಿತಿನ್ ಬೆಳುವಾಯಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಫೋಟೋಗ್ರಾಫರ್ಸ್ ಆಳ್ವಾಸ್ ಆಸ್ಪತ್ರೆಗೆ ತೆರಳಿ ರಕ್ತದಾನ ಮಾಡಿದರು.