Call Us Now: 08272 221717

ಶುಲ್ಕ ವಸೂಲಿ : ಖಾಸಗಿ ಶಾಲೆಗಳಿಗೆ ಮೂಡುಬಿದಿರೆ ಶಿಕ್ಷಣಾಧಿಕಾರಿ ಖಡಕ್ ಎಚ್ಚರಿಕೆ

June 13,2020

ಮೂಡುಬಿದಿರೆ : ಸಾರ್ವಜನಿಕ ಶಿಕ್ಷಣ ಇಲಾಖಾ ಆಯುಕ್ತರ ಸುತ್ತೋಲೆಯಂತೆ ವಿದ್ಯಾರ್ಥಿಗಳಿಂದ ಬೋಧನಾ ಶುಲ್ಕವನ್ನು ಪಡೆಯುವ ಕುರಿತು ಶುಲ್ಕ ಪಾವತಿಸಲು ಸಾಧ್ಯವಿಲ್ಲವೆಂದು ನಿರಾಕರಿಸುವ ಪೋಷಕರಿಂದ ಮುಂದಿನ ಆದೇಶದವರೆಗೆ ಯಾವುದೇ ಕಾರಣಕ್ಕೂ ಶುಲ್ಕ ವಸೂಲು ಮಾಡುವಂತಿಲ್ಲ ಹಾಗೂ ವಿದ್ಯಾರ್ಥಿ ಪೋಷಕರಿಗೆ ಶುಲ್ಕ ಪಾವತಿಸಲು ಯಾವುದೇ ರೀತಿಯ ಒತ್ತಡ ಹೇರಬಾರದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಪ್ರಕಟನೆ ತಿಳಿಸಿದೆ.

ಮಾನ್ಯ ಜಿಲ್ಲಾಧಿಕಾರಿಯವರಿಗೆ ಹಾಗೂ ಉಪನಿರ್ದೇಶಕರಿಗೆ ಪೋಷಕರಿಂದ ಕೆಲವು ಖಾಸಗಿ ಶಾಲೆಯವರು ಶಾಲಾ ಶುಲ್ಕವನ್ನು ವಸೂಲು ಮಾಡುತ್ತಿರುವ ಬಗ್ಗೆ ದೂರವಾಣಿ ಮೂಲಕ ದೂರುಗಳು ಬರುತ್ತಿವೆ. ಶುಲ್ಕವನ್ನು ಪಾವತಿಸದ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕಿರುವ ಕುರಿತು ದೂರುಗಳು ಬಂದಲ್ಲಿ ಅಂತಹ ಶಾಲೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಕ್ಷಣ ಹಕ್ಕು ಕಾಯಿದೆಯಡಿ ಶಿಸ್ತು ಕ್ರಮ ವಹಿಸಲಾಗುವುದು ಹಾಗೂ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಽಕಾರಕ್ಕೆ ವರದಿ ಮಾಡಲಾಗುವುದು Ḵ ಎಂದು ಕ್ಷೇತ್ರ
ಶಿಕ್ಷಣಾಧಿಕಾರಿ (ಪ್ರಭಾರ) ರಾಜಶ್ರೀ ಬಿ. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.