Call Us Now: 08272 221717

ರಾಹುಲ್ ಗಾಂಧಿ ಹುಟ್ಟುಹಬ್ಬ: ಮೂಡುಬಿದಿರೆಯಲ್ಲಿ ಹಣ್ಣುಹಂಪಲು ವಿತರಣೆ

June 22, 2020

ಮೂಡುಬಿದಿರೆ:ರಾಷ್ಟ್ರೀಯ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಅಭಯಚಂದ್ರ ಜೈನ್ ಶುಕ್ರವಾರ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿ ಬಳಿಕ ಹಣ್ಣು ಹಂಪಲು ವಿತರಿಸಿದರು.


ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷಕ್ಕೆ ಸ್ಪೂರ್ತಿ. ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದಾಗ ಮಂತ್ರಿಯಾಗುವ ಅವಕಾಶವಿದ್ದಾಗಲು ಅದನ್ನು ತ್ಯಾಗ ಮಾಡಿ, ಜನಸೇವೆ ಹಾಗೂ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಯುವ ಜನತೆಯ ಆಶಾಕಿರಣವಾಗಿರುವ ರಾಹುಲ್ ಗಾಂಧಿ ಅವರ ಹುಟ್ಟು ಹಬ್ಬವನ್ನು ಆಚರಿಸುವ ಮೂಲಕ ಅವರಿಗೆ ಪ್ರೋತ್ಸಾಹ ನೀಡುತ್ತಿದ್ದೇವೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಪ್ರಿಯಾ ಡಿ. ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ ಸನಿಲ್, ಪುರಸಭಾ ಸದಸ್ಯರಾದ ಕೊರಗಪ್ಪ, ಸುರೇಶ್ ಪ್ರಭು, ಜೊಸ್ಸಿ ಮಿನೇಜಸ್, ಪುರಂದರ ದೇವಾಡಿಗ, ಕಾಂಗ್ರೆಸ್ ಮುಖಂಡರಾದ ರತ್ನಾಕರ ಸಿ. ಮೊಯಿಲಿ, ವಾಸು ಪೂಜಾರಿ, ವೈದ್ಯಾಧಿಕಾರಿ ಡಾ.ಶಶಿಕಲ ಉಪಸ್ಥಿತರಿದ್ದರು. ಇದಕ್ಕು ಮೊದಲು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಾಲ್ವನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಚೀನಾ ಸೈನಿಕರಿಂದ ಹತರಾದ ಭಾರತೀಯ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.