Call Us Now: 08272 221717

ಸರ್ಕಾರಿ ನೌಕರರ ದಿನಾಚರಣೆ: ಮೂಡುಬಿದಿರೆ ತಾಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹರ್ಷ

September 18, 2020

ಮೂಡುಬಿದಿರೆ: ಸುಮಾರು 6 ಲಕ್ಷ ಜನ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾದ ಸರ್ಕಾರಿ ನೌಕರರ ದಿನಾಚರಣೆ ಆಚರಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿರುವುದು ರಾಜ್ಯ ಸರ್ಕಾರಿ ನೌಕರರಿಗೆ ತುಂಬಾ ಸಂತಸ ತಂದಿದೆ ಎಂದು ಮೂಡುಬಿದಿರೆ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಎಸ್. ನಾಗೇಶ್ ತಿಳಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ರಾಜ್ಯಾಧ್ಯಕ್ಷ ಸಿ.ಎಸ್, ಷಡಾಕ್ಷರಿ ರಾಜ್ಯ ನೌಕರರ ಪರವಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಸರ್ಕಾರದ ವತಿಯಿಂದಲೇ ಸರ್ಕಾರಿ ನೌಕರರ ದಿನಾಚರಣೆಯನ್ನು ಆಚರಿಸಲು ಮನವಿ ಮಾಡಿಕೊಂಡಿದ್ದರು, ಆ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದಿನಾಚರಣೆ ಆಚರಿಸಲು ಆದೇಶ ನೀಡಿದ್ದಾರೆ.

ಸರಕಾರಿ ನೌಕರರ ದಿನಾಚರಣೆಗೆ ಆದೇಶ ನೀಡಿದ ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಿಗೆ ಮೂಡುಬಿದಿರೆ ತಾಲೂಕು ಸಂಘದ ಪದಾಧಿಕಾರಿಗಳು ಹಾಗೂ ತಾಲೂಕಿನ ಸಮಸ್ತ ಸರ್ಕಾರಿ ನೌಕರರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದು ನಾಗೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.