Call Us Now: 08272 221717

ಮೂಡುಬಿದಿರೆ ಶ್ರೀಧವಲಾ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಸುದರ್ಶನ್ ಕುಮಾರ್ ಆಯ್ಕೆ

July 31, 2020

ಮೂಡುಬಿದಿರೆ : ಶ್ರೀ ಧವಲಾ ಕಾಲೇಜು, ಮೂಡುಬಿದಿರೆ ಇದರ ಪ್ರಾಂಶುಪಾಲರಾಗಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸುದರ್ಶನ ಕುಮಾರ್ ಆಯ್ಕೆಯಾಗಿದ್ದಾರೆ.

ವಯೋನಿವೃತ್ತಿ ಹೊಂದಿದ ಪ್ರಾಂಶುಪಾಲ ಡಾ. ರವೀಶ ಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿದರು.

ಸುಮಾರು 36 ವರ್ಷಗಳ ಸೇವಾನುಭವವನ್ನು ಹೊಂದಿರುವ ಇವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿಯಾಗಿ, ಮಂಗಳೂರು ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ಸಂಘದ ಅಧ್ಯಕ್ಷರಾಗಿ, ಮಂಗಳೂರು ವಿಶ್ವವಿದ್ಯಾನಿಲಯ ಪರೀಕ್ಷಾ ಮಂಡಳಿಯ ಅಧ್ಯಕ್ಷರಾಗಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಅಧ್ಯಯನ ಮಂಡಳಿಯ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ.