Call Us Now: 08272 221717

ಆಳ್ವಾಸ್ ಬಿ.ಎಡ್ ಕಾಲೇಜಿಗೆ ಶೇ.100 ಫಲಿತಾಂಶ

July 12, 2020

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯದ 2020ನೇ ಸಾಲಿನ ಬಿ.ಎಡ್ ತೃತೀಯ ಹಾಗೂ ಚತುರ್ಥ ಸೆಮಿಸ್ಟರ್‌ನಲ್ಲಿ ಮೂಡುಬಿದಿರೆ ಆಳ್ವಾಸ್ ಬಿ.ಎಡ್ ಕಾಲೇಜು ಶೇ.100 ಫಲಿತಾಂಶವನ್ನು ದಾಖಲಿಸಿದೆ.

ತೃತೀಯ ಸೆಮಿಷ್ಟರ್‌ನಲ್ಲಿ ಪರೀಕ್ಷೆ ಬರೆದ ಎಲ್ಲ 50 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 35 ಮಂದಿ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 8 ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಚತುರ್ಥ ಸೆಮಿಷ್ಟರ್ ಪರೀಕ್ಷೆ ಬರೆದ 70 ಮಂದಿ ವಿದ್ಯಾರ್ಥಿಗಳೆಲ್ಲರೂ ಉತ್ತೀರ್ಣರಾಗಿದ್ದಾರೆ. 67 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 3 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.