Call Us Now: 08272 221717

ಹುತಾತ್ಮ ಯೋಧರಿಗೆ ಮೂಡುಬಿದಿರೆ ಬಿಜೆಪಿಯಿಂದ ಶ್ರದ್ಧಾಂಜಲಿ

June 19, 2020

ಮೂಡುಬಿದಿರೆ: ಲಡಾಖ್‍ನ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವಿನ ಘರ್ಷಣೆಯಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಬಿಜೆಪಿ ಮೂಡುಬಿದಿರೆ ಮಂಡಲದ ವತಿಯಿಂದ ಇಲ್ಲಿನ ಬಸ್ ನಿಲ್ದಾಣದಲ್ಲಿ ಗುರುವಾರ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಜಿಪಂ ಸದಸ್ಯ ಕೆ.ಪಿ ಸುಚರಿತ ಶೆಟ್ಟಿ ಮಾತನಾಡಿ, ನಮ್ಮ ಯೋಧರು ಗಡಿಪ್ರದೇಶಗಳಲ್ಲಿ ವೈರಿಗಳ ಆಕ್ರಮಣವನ್ನು ತಪ್ಪಿಸಲು ಶ್ರಮ ಪಡುತ್ತಿದ್ದಾರೆ. ಬಿಜೆಪಿಯ ಕಾರ್ಯಕರ್ತರು ಸಾಮಾಜಿಕ ಅಂತರ, ಮಾಸ್ಕ್ ಧರಿಸುವ ಮೂಲಕ ಸುರಕ್ಷಿತ ಕ್ರಮ ಕೈಗೊಂಡು ಜನರಲ್ಲಿ ಜಾಗೃತಿ ಮೂಡಿಸಬೇಕು. ಈ ಮೂಲಕ ಆರೋಗ್ಯಕ್ಕೆ ವೈರಿಯಾಗಿರುವ ಕೊರೊನಾವನ್ನು ಹೋಗಲಾಡಿಸಲು ಶ್ರಮವಹಿಸಬೇಕೆಂದರು.
ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಬಿಜೆಪಿ ಮೂಲ್ಕಿ ಮೂಡುಬಿದಿರೆ ಮಂಡಲ ಅಧ್ಯಕ್ಷ ಸುನೀಲ್ ಆಳ್ವ, ಪ್ರಧಾನ ಕಾಯದರ್ಶಿಗಳಾದ ಗೋಪಾಲ ಶೆಟ್ಟಿಗಾರ್, ಕೇಶವ ಕರ್ಕೇರ, ಬಿಜೆಪಿ ಮೂಡುಬಿದಿರೆ ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಲಕ್ಷ್ಮಣ್ ಪೂಜಾರಿ, ಬಿಜೆಪಿ ಮುಖಂಡರಾದ ಕೆ.ಪಿ ಜಗದೀಶ್ ಅಧಿಕಾರಿ, ಈಶ್ವರ ಕಟೀಲ್, ಬಾಹುಬಲಿ ಪ್ರಸಾದ್, ಕೆ.ಆರ್ ಪಂಡಿತ್, ಹರೀಶ್ ಎಂ.ಕೆ ಹಾಗೂ ಪುರಸಭೆ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.