Call Us Now: 08272 221717

ಮೂಡುಬಿದಿರೆ ವ್ಯಕ್ತಿ ಕೊರೊನೊಗೆ ಬಲಿ

July 7, 2020

ಮೂಡುಬಿದಿರೆ: ಇಲ್ಲಿನ ಪುರಸಭಾ ವ್ಯಾಪ್ತಿಯ ವ್ಯಕ್ತಿಯೊಬ್ಬರು ಮಂಗಳವಾರ ಮಂಗಳೂರಿನಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದು, ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ.

ಮೂಡುಬಿದಿರೆ ಕೋಟೆಬಾಗಿಲು ನಿವಾಸಿಯಾಗಿರುವ 53 ವರ್ಷದ ವ್ಯಕ್ತಿಯು ಅನಾರೊಗ್ಯದ ಕಾರಣ ಮಂಗಳೂರಿನ ಖಾಸಗಿ ಅಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಮೃತಪಟ್ಟಿದ್ದಾರೆ. ಇವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಮನೆಯನ್ನು ಮೂಡುಬಿದಿರೆ ತಹಸೀಲ್ದಾರ್ ನೇತೃತ್ವದಲ್ಲಿ ಸೀಲ್ ಡೌನ್ ಮಾಡಲಾಗುತ್ತಿದೆ.