Call Us Now: 08272 221717

ಮೂಡುಬಿದಿರೆ: ಸಿಪಿಐಎಂ ಸಂಘಟನೆಯಿಂದ ಪ್ರತಿಭಟನೆ

June 16, 2020

ಮೂಡುಬಿದಿರೆ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಡವ, ಮಧ್ಯಮ ವರ್ಗದವರು ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐಎಂ ಪಕ್ಷದ ವತಿಯಿಂದ ತಹಸೀಲ್ದಾರ್ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಯಿತು.
ಪ್ರತೀ ವ್ಯಕ್ತಿಗೆ 10ಕೆಜಿಯಂತೆ ಆರು ತಿಂಗಳು ಉಚಿತ ಆಹಾರ ಧಾನ್ಯಗಳನ್ನು ವಿತರಿಸಬೇಕು. ಉದ್ಯೋಗ ಖಾತ್ರಿಯಡಿಯಲ್ಲಿ ಹೆಚ್ಚಿಸಿದ ಕೂಲಿಯೊಂದಿಗೆ ಕನಿಷ್ಠ ವರ್ಷದಲ್ಲಿ 200ದಿನಗಳ ಉದ್ಯೋಗ ನೀಡಬೇಕು. ನಗರದ ಬಡವರಿಗೂ ಈ ಯೋಜನೆಯನ್ನು ವಿಸ್ತರಿಸಬೇಕು. ನಿರುದ್ಯೋಗಿಗಳಿಗೆ ನಿರುದ್ಯೋಗಿ ಭತ್ತೆöಯನ್ನು ನೀಡಬೇಕು. ಸಾರ್ವಜನಿಕ ವಲಯದ ಖಾಸಗೀಕರಣ, ಕಾರ್ಮಿಕ ಕಾನೂನುಗಳ ರದ್ದತಿಯನ್ನು ನಿಲ್ಲಿಸಬೇಕು. ಕರ್ನಾಟಕದಲ್ಲಿ ಆರೋಗ್ಯ ಪರಿಕರಗಳಾದ ವೆಂಟಿಲೇಟರ್ಸ್, ಅಗತ್ಯ ಔಷಧಗಳ ಕೊರತೆಯಿದ್ದು ಅವುಗಳನ್ನು ಗರಿಷ್ಠ ಪ್ರಮಾಣದಲ್ಲಿ ರಾಜ್ಯಕ್ಕೆ ಪೂರೈಸಬೇಕು ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಯಿತು.
ಸಿಪಿಐಎಂ ರಾಜ್ಯ ಸಮಿತಿ ಸದಸ್ಯ ಕೆ. ಯಾದವ ಶೆಟ್ಟಿ, ಜಿಲ್ಲಾ ಸಮಿತಿ ಸದಸ್ಯ ರಮಣಿ ಹಾಗೂ ತಾಲೂಕು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.