Call Us Now: 08272 221717

ಜುಲೈ 1ರಂದು ಮೂಡುಬಿದಿರೆಯಲ್ಲಿ ಮಾಧ್ಯಮ ಹಬ್ಬ

June 27, 2020

ಮೂಡುಬಿದಿರೆ: ಮೂಡುಬಿದಿರೆ ಪ್ರೆಸ್ ಕ್ಲಬ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮೂಡುಬಿದಿರೆ ವತಿಯಿಂದ `ಪತ್ರಿಕಾ ದಿನಾಚರಣೆ’ ಅಂಗವಾಗಿ ಜುಲೈ 1 ಬುಧವಾರದಂದು `ಮಾಧ್ಯಮ ಹಬ್ಬ 2020′ ಜರುಗಲಿದೆ.

ಸಂಘದ ಅಧ್ಯಕ್ಷ ವೇಣುಗೋಪಾಲ್ ಅವರ ಅಧ್ಯಕ್ಷತೆಯಲ್ಲಿ ಮೂಡುಬಿದಿರೆ ಸಮಾಜ ಮಂದಿರನಡೆಯುವ ಕಾರ್ಯಕ್ರಮದಲ್ಲಿ ಶಾಸಕ ಉಮಾನಾಥ ಕೋಟ್ಯಾನ್, ಮೂಡುಬಿದಿರೆ ಸಮಾಜಮಂದಿರದ ಅಧ್ಯಕ್ಷ ಕೆ.ಅಭಯಚಂದ್ರ ಜೈನ್, ಕಾರ್ಯನಿರತ ಪತ್ರಕರ್ತರ ಸಂಘದ ದ.ಕ ಜಿಲ್ಲಾಧ್ಯಕ್ಷ ಶ್ರೀನಿವಾಸ ಇಂದಾಜೆ ಮುಖ್ಯ ಅತಿಥಿಗಳಾಗಿರುವರು.
ವಿಶ್ರಾಂತ ಪತ್ರಕರ್ತ ಸದಾನಂದ ಹೆಗಡೆ ಕಟ್ಟೆ ಪ್ರಾಯೋಜಿತ ದತ್ತಿನಿಧಿ ಉಪನ್ಯಾಸದಲ್ಲಿ ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಸಂಯೋಜಕ ಶ್ರೀನಿವಾಸ ಪೆಜತ್ತಾಯ, `ಪತ್ರಕರ್ತರ ಇಂದಿನ ಸವಾಲು, ಸಾಧ್ಯತೆ’ ವಿಷಯದ ಕುರಿತು ಮಾತನಾಡಲಿದ್ದಾರೆ. ಸಾಹಿತಿ, ಹಿರಿಯ ಪತ್ರಕರ್ತ ಸದಾನಂದ ನಾರಾವಿ ಅವರನ್ನು ಸನ್ಮಾನಿಸಲಾಗುವುದು. ಕೊರೋನಾ ಸಂಕಷ್ಟದ ಸಮಯದಲ್ಲಿ ಸಮಾಜಕ್ಕೆ ಸೇವೆಯಲ್ಲಿ ತೊಡಗಿಕೊಂಡ ಸಂಘಟನೆಗಳು ಮತ್ತು ಪ್ರಮುಖರ ಅಭಿನಂದಿಸಲಾಗುವುದು. ಸರ್ಕಾರದ ನಿಯಮಾವಳಿಗಳನ್ನು ಗೌರವಿಸಿ ಸೀಮಿತ ಸಂಖ್ಯೆಯ ಆಹ್ವಾನಿತರ ಉಪಸ್ಥಿತಿಯಲ್ಲಿ ಸರಳವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಎಂಡಿಬಿ ಲೈವ್ ಹಾಗೂ ಬಿದಿರೆ ವೆಬ್‌ಸೈಟ್‌ನಲ್ಲಿ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.